HomeLatest NewsBIG NEWS: ರಸ್ತೆ ಕಾಮಗಾರಿ ನಡೆಸುತ್ತಿದ್ದವರ ಮೇಲೆ ಹರಿದ ಲಾರಿ: ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು

BIG NEWS: ರಸ್ತೆ ಕಾಮಗಾರಿ ನಡೆಸುತ್ತಿದ್ದವರ ಮೇಲೆ ಹರಿದ ಲಾರಿ: ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು

ಬೆಳಗಾವಿ: ರಸ್ತೆ ಕಾಮಗಾರಿ ನಡೆಸುತ್ತಿದ್ದವರ ಮೇಲೆ ಟ್ಯಾಂಕರ್ ಲಾರಿಯೊಂದು ಹರಿದು ಹೋಗಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಇಟಗಿ ಕ್ರಾಸ್ ಬಳಿ ನಡೆದಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕ್ಕಾರ್ಮಿಕರ ಮೇಲೆಯೇ ಲಾರಿ ಹರಿದಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಓರ್ವ ಕಾರ್ಮಿಕ ಹಾಗೂ ಟ್ಯಾಂಕರ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular