HomeKarnatakaBREAKING: ಬೈಕ್ ಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

BREAKING: ಬೈಕ್ ಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ ಬಳಿ ಘಟನೆ ನಡೆದಿದೆ.

ಬಸವರಾಜ ಪ್ರಭುನವರ(48), ಯಲ್ಲಪ್ಪ(46) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular