HomeLatest NewsBIG NEWS: ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

BIG NEWS: ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಅಪರಿಚಿತ ವಾಹನ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಲಕಿ-ಮುರಗೋಡ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಸವದತ್ತಿ ತಾಲೂಕಿನ ಹುಲಿಕೇರಿ ತಾಂಡಾದ ನಿವಾಸಿಗಳಾದ ವಿಶಾಲ ಲಮಾಣಿ (20) ಮತ್ತು ಅಪ್ಪು ಲಮಾಣಿ (23) ಎಂದು ಗುರುತಿಸಲಾಗಿದೆ.

ಅಪಘಾತದ ಭೀಕರತೆಗೆ ತೀವ್ರ ರಕ್ತಸ್ರಾವದಿಂದ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಬಳಿಕ ವಾಹನದ ಸಮೇತ ಚಾಲಕ ಪರಾರುಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular