ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಚೆನ್ನೈನಿಂದ ಬರುವ ಫ್ಲೈಟ್ ನಲ್ಲಿ ಬಾಂಬ್ ಇದೆ ಎಂದು ಸಂದೇಶ ರವಾನೆ

ಬೆಳಗಾವಿ: ಕೆಲದಿನಗಳಿಂದ ಭಾರತೀಯ ವಿಮಾನಯಾನ ಸಂಸ್ಥೆ ಹಾಗೂ ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಈ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶದ ಇ-ಮೇಲ್ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ.

ಚೆನ್ನೈನಿಂದ ಬೆಳಗಾವಿಗೆ ಬರುವ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಗಾವಿ ಏರ್ ಪೋರ್ಟ್ ಅಥಾರಿಟಿಗೆ ಇ-ಮೇಲ್ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಚೆನ್ನೈ ನಿಂದ ಬೆಳಗಾವಿಗೆ ಬರುವ ವಿಮಾನ ಸಂಪರ್ಕ ಕಡಿತಗೊಳಿಸಲಾಗಿದೆ.

ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಕುರಿತು ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಂಬ್ ಬೆದರಿಕೆ ಇ-ಮೇಲ್ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read