HomeKarnatakaಸ್ಕೂಟಿಗೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಡಿಕ್ಕಿ: ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವು

ಸ್ಕೂಟಿಗೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಡಿಕ್ಕಿ: ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವು

ಬೆಳಗಾವಿ: ಎಲೆಕ್ಟ್ರಿಕ್ ಸ್ಕೂಟಿ ಹಾಗೂ ಕಬ್ಬು ತುಂಬಿದ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಬಳಿ ಈ ದುರಂತ ಸಂಭವಿಸಿದೆ. ವಡೇರಹಟ್ಟಿ ನಿವಾಸಿ ಅನಿತಾ ಡೂಗನವರ (26) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಮಹಿಳೆ ಅನಿತಾ ತನ್ನ ಗಂಡನ ಜೊತೆ ಲೋಳಸೂರ ಬಸ್ ನಿಲ್ದಾಣಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ಸ್ಕೂಟಿಗೆ ಡಿಕ್ಕಿ ಹೋಡೆದಿದೆ. ಅಪಘಾತದಲ್ಲಿ ಕೆಳಗೆ ಬಿದ್ದ ಅನಿತಾ ಗಂಭೀರವಾಗಿ ಗಾಯಗೊಮ್ಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular