HomeKarnatakaBIG NEWS: ಮಹಿಳೆಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ: ಬಿಜೆಪಿ ಮುಖಂಡನ ವಿರುದ್ಧ FIR ದಾಖಲು

BIG NEWS: ಮಹಿಳೆಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ: ಬಿಜೆಪಿ ಮುಖಂಡನ ವಿರುದ್ಧ FIR ದಾಖಲು

ಬೆಳಗಾವಿ: ಬಿಜೆಪಿ ಮುಖಂಡ ಹಾಗೂ ಆತನ ಮಗ ತನ್ನನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿ, ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಕೆಲ ದಿನಗಳ ಹಿಂದೆ ಪತಿ ಹಾಗೂ ಮಾವನ ವಿರುದ್ಧ ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ ಆರೋಪ ಮಾಡಿ ವಿಷ ಸೇವಿಸಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಇದೀಗ ಉಲ್ಟಾ ಹೊಡೆದಿದ್ದು, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹಾಗೂ ಆತನ ಮಗ ಜಸ್ವೀರ್ ಸಿಂಗ್ ತನ್ನನ್ನು ಕೂಡಿಹಾಕಿ ದೌರ್ಜನ್ಯ ನಡೆಸಿದ್ದಾರೆ. ಪತಿ ಹಾಗೂ ಮಾವನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವಂತೆ ಹಿಂಸೆ ನೀಡಿ ವಿಷ ನೀಡಿದ್ದರು ಎಂದು ಆರೋಪಿಸಿದ್ದಾಳೆ.

ಮಹಿಳೆ ನೀಡಿದ ದೂರಿನ ಮೇರೆಗೆ ಬೆಳಗಾವಿಯ ಖಡೆಬಜಾರ್ ಠಾಣೆಯಲ್ಲಿ ಪೃಥ್ವಿ ಸಿಂಗ್ ಹಾಗೂ ಮಗನ ವಿರುದ್ಧ ಎಫ್ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೃಥ್ವಿ ಸಿಂಗ್ ಅವರೇ ತನ್ನ ಮದುವೆ ಮಾಡಿಸಿದ್ದರು. ಪತಿ ಹಾಗೂ ತಾನು ಚನ್ನಾಗಿಯೇ ಇದ್ದೆವು. ಚನ್ನಾಗಿ ಇದ್ದ ಸಂಸಾರದಲ್ಲಿ ಹುಳಿ ಹಿಂಡಿದ್ದೇ ಪೃಥ್ವಿ ಸಿಂಗ್. ತನ್ನನ್ನು ಬೆದರಿಸಿ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದು, ಪತಿ ಹಾಗೂ ಮಾವನ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಈ ರೀತಿ ಮಾಡಿಸುತ್ತಿದ್ದಾರೆ. ಅಲ್ಲದೇ ಪೃಥ್ವಿ ಸಿಂಗ್ ಬಿಜೆಪಿಯ ಮುಖಂಡನೇ ಅಲ್ಲ. ಯಾವ ಪಕ್ಷದ ಕಾರ್ಯಕರ್ತನೂ ಅಲ್ಲ. ಯಾವುದೋ ದುರುದ್ದೇಶಕ್ಕಾಗಿ ತನ್ನನ್ನು ಬೆದರಿಸಿ ಹಿಂಸಿಸುತ್ತಿದ್ದು, ರಕ್ಷಣೆ ನೀಡುವಂತೆ ಮಹಿಳೆ ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular