HomeLatest NewsBIG NEWS: ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ; 1 ವರ್ಷದ ಮಗು ಬಚಾವ್

BIG NEWS: ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ; 1 ವರ್ಷದ ಮಗು ಬಚಾವ್

ಬೆಳಗಾವಿ: ನಿಂತಿದ್ದ ಕಂಟೆನರ್ ಲಾರಿಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಂದು ವರ್ಷದ ಮಗು ಬಚಾಅವ್ ಆಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದ ಸಂಭಾಜಿ ನಗರದ ಜಿಗರ ಕಿಶೋರ ನಾಕ್ರಾನಿ ಹಾಗೂ ಪತ್ನಿ ಹೇತಿಕಾ (24) ಮೃತಪಟ್ಟಿದ್ದಾರೆ. ಒಂದು ವರ್ಷದ ಮಗಳು ವೃಷ್ಟಿ ಬದುಕುಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಬ್ಬಳ್ಳಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ಕೂಗನೊಳ್ಳಿ  ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಕಂಟೇನರಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

ನಿಪ್ಪಾಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular