HomeLive NewsBREAKING: ಬೆಳಗಾವಿ ಚೋರ್ಲಾ ಘಾಟ್ ನಲ್ಲಿ 400 ಕೋಟಿ ದರೋಡೆ ಪ್ರಕರಣ: ಕಾರು ಚಾಲಕ ಅರೆಸ್ಟ್

BREAKING: ಬೆಳಗಾವಿ ಚೋರ್ಲಾ ಘಾಟ್ ನಲ್ಲಿ 400 ಕೋಟಿ ದರೋಡೆ ಪ್ರಕರಣ: ಕಾರು ಚಾಲಕ ಅರೆಸ್ಟ್

ನಾಸಿಕ್: ಕರ್ನಾಟಕ-ಮಹಾರಾಷ್ಟ್ರ-ಗೋವಾ ಗಡಿಯಲ್ಲ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಎಸ್ ಐಟಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಫಾರ್ಚೂನರ್ ಕಾರು ಚಾಅಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಬೆಳಗಾವಿಯ ಚೋರ್ಲಾ ಘಾಟ್ ನಲ್ಲಿ ಹಣ ಸಾಗಿತ್ತಿದ್ದು ಎರಡು ಕಂಟೈನರ್ ಗಳನ್ನು ಹೈಜಾಕ್ ಮಾಡಿ ದರೋಡೆಕೋರರು 400 ಕೋಟಿ ದರೋಡೆ ಮಾಡಿರುವ ಘಟನೆ ನಡೆದಿದೆ. ಹಣ ಸಾಗಿಸುತ್ತಿದ್ದ ಸಿಬ್ಬಂದಿ ಸಂದೀಪ್ ಪಾಟೀಲ್ ಎಂಬಾತ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಒಂದೂವರೆ ತಿಂಗಳ ಕಾಲ ಸಂದೀಪ್ ಪಾಟೀಲ್ ನನ್ನು ಕಿಡ್ಯಾಪ್ ಚಿತ್ರಹಿಂಸೆ ನೀಡಿದ್ದಾಗಿಯೂ ದೂರು ನೀಡಿದ್ದರು.

ಇದೀಗ ದರೋಡೆ ಪ್ರಕರಣದಲ್ಲಿ ಫಾರ್ಚೂನರ್ ಕಾರು ಚಾಲಕನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಮೂಲಕ ಹಣ ದರೋಡೆ ಕೇಸ್ ನಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ೭ಕ್ಕೆ ಏರಿಕೆಯಾಗಿದೆ. ಕಾರು ಚಾಲಕ ದೂರುದಾರ ಸಂದೀಪ್ ಪಾಟೀಲ್ ನನ್ನು ಅಪಹರಿಸಿದ್ದ. ಇಂದು ಸಂಜೆ ವೇಳೆ ಬಂಧನದ ಬಗ್ಗೆ ಮಹಾರಾಷ್ಟ್ರ ಪೊಲೀಸರು ಅಧಿಕೃತವಾಗಿ ಮಾಹಿತಿ ನೀದುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೋವಾದಿಂದ ಮಹಾರಾಷ್ಟ್ರಕ್ಕೆ ಹಣ ಸಾಗಿಸುತ್ತಿದ್ದಾಗ ಅಕ್ಟೋಬರ್ 2025ರ ಅಕ್ಟೋಬರ್ 16ರಂದು ಬೆಳಗಾವಿಯ ಚೋರ್ಲಾ ಘಾಟ್ ಬಳಿ 2 ಕಂಟೇನರ್​​ಗಳನ್ನು ಹೈಜಾಕ್​​ ಮಾಡಿ 400 ಕೋಟಿ ರೂ ಹಣವನ್ನು ದರೋಡೆ ಮಾಡಲಾಗಿದೆ ಎಂದು ದೂರು ದಾಖಲಾಗಿದೆ. ನಾಸಿಕ್ ನ ಕಿಶೋರ್ ಶೇಟ್ ಎಂಬ ಉದ್ಯಮಿಗೆ ಸೇರಿದ್ದ ಹಣ ಇದಾಗಿದ್ದು, ಸಂದೀಪ್ ಪಾಟೀಲ್ ಎಂಬಾತ ದೂರು ನೀಡಿದ್ದ ಬೆನ್ನಲ್ಲೇ ಪ್ರಕರಣ ಬೆಳಕಿಗೆ ಬಂದಿದೆ.

ನನ್ನನ್ನು ಒಂದುವರೆ ತಿಂಗಳ ಕಾಲ ಕೂಡಿಟ್ಟು ಚಿತ್ರಹಿಂಸೆ ನೀಡಿದ್ದಾರೆ. ಅಲ್ಲದೇ ಮಹಾರಾಷ್ಟ್ರ ಇಬ್ಬರು ಪೊಲೀಸರು ನನಗೆ ಜೀವ ಬೆದರಿಕೆ ಹಾಕಿದ್ದು, ರಕ್ಷಣೆ ನೀಡುವಂತೆ ಸಂದೀಪ್ ಪಾಟೀಲ್ ವಿಡಿಯೋ ಹೇಳಿಕೆ ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ‌ಸಿಎಂ ದೇವೇಂದ್ರ ಫಡ್ನವಿಸ್, ಪ್ರಕರಣ ತನಿಖೆಗೆ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಕಂಟೇನರ್ ‌ರಾಬರಿ ಆದ ಬಳಿಕ ಮಹಾರಾಷ್ಟ್ರ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಸಹಚರರು ಸಂದೀಪ್ ಪಾಟೀಲ್​​ಗೆ ಗನ್ ಪಾಯಿಂಟ್ ತೋರಿಸಿ ಅಪಹರಿಸಿದ್ದರು. ಒಂದೂವರೆ ತಿಂಗಳು ಒತ್ತೆಯಾಳಾಗಿಸಿಕೊಂಡು ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಮಹಾರಾಷ್ಟ್ರ ಎಸ್ ಐಟಿ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಪರಾರಿಯಾಗಿರುವ ಕಿಶೋರ್, ಅಜರ್ ಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular