ಬೆಳಗಾವಿಯಲ್ಲಿ ಇಂದು ‘ಗಾಂಧಿ ಭಾರತ’ ರ್ಯಾಲಿ: ಎರಡು ಲಕ್ಷಕ್ಕೂ ಅಧಿಕ ಜನ ಭಾಗಿ

ಬೆಳಗಾವಿ: ಬೆಳಗಾವಿಯಲ್ಲಿ 1924ರಲ್ಲಿ ನಡೆದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗಾಂಧಿ ಭಾರತ ಬೃಹತ್ ರ್ಯಾಲಿಯಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ಸಾಧ್ಯತೆ ಇದೆ. ಅಧಿವೇಶನದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಕಾಂಗ್ರೆಸ್ ನಾಯಕರು ದಂಡೇ ಹರಿದು ಬಂದಿದೆ. ಎಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ನಾಯಕರ ದಂಡೇ ಕಾರ್ಯಕ್ರಮಕ್ಕೆ ಆಗಮಿಸಲಿದೆ.

ಬೆಳಗ್ಗೆ ಬೆಳಗ್ಗೆ 10:30 ಕ್ಕೆ ಬೆಳಗಾವಿಯ ಸುವರ್ಣ ಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಬೃಹತ್ ಪ್ರತಿಮೆ ಅನಾವರಣಗೊಳ್ಳಲಿದೆ. ಮಧ್ಯಾಹ್ನ 3 ಗಂಟೆಗೆ ಸಿಪಿಎಡ್ ಮೈದಾನದಲ್ಲಿ ‘ಜೈ ಬಾಪೂ, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ನಡೆಸಲಿದ್ದು, ಇದಕ್ಕಾಗಿ ಬೃಹತ್ ವೇದಿಕೆ, ಪೆಂಡಾಲ್ ನಿರ್ಮಿಸಿ ಒಂದೂವರೆ ಲಕ್ಷಕ್ಕೂ ಅಧಿಕ ಕುರ್ಚಿಗಳನ್ನು ಹಾಕಲಾಗಿದೆ. ಸಮಾವೇಶಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ನಾಯಕರ ಕಟೌಟ್, ಬ್ಯಾನರ್ ಗಳು, ಪಕ್ಷದ ಬಾವುಟಗಳು ರಾರಾಜಿಸುತ್ತಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read