HomeLatest NewsBREAKING: ಬೆಳಗಾವಿ: ಕೋಟ್ ಆವರಣದಲ್ಲಿಯೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

BREAKING: ಬೆಳಗಾವಿ: ಕೋಟ್ ಆವರಣದಲ್ಲಿಯೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ವಕೀಲ ಜಹೀರ್ ಹಲ್ಲೆಗೊಳಗಾದವರು. ಬೆಳಗವೈ ಕೋರ್ಟ್ ಆವರಣದಲ್ಲಿಯೇ ವಕೀಲ ಜಹೀರ್ ಅವರ ಮೇಲೆ ಕಲ್ಲು, ರಾಡ್ ಗಳಿಂದ ಹಲ್ಲೆ ನಡೆಸಲಾಗಿದೆ. ಜಹೀರ್ ಅವರ ತಲೆ, ಕಿವಿ, ಮೂಗು, ಹೊಟ್ಟೆಯ ಭಾಗಕ್ಕೆ ಗಂಭೀರವಾದ ಗಾಯಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮೀನು ವ್ಯಾಜ್ಯ ಕೇಸ್ ವಿಚಾರಣೆ ಮುಗಿಸಿ ಹೊರ ಬರುತ್ತಿದ್ದಂತೆಯೇ ವಕೀಲನ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳು ವಲೀಕರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular