HomeLatest NewsBIG NEWS: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಸೋಂಕು ಹೆಚ್ಚಳ: ಮತ್ತೋರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆ

BIG NEWS: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಸೋಂಕು ಹೆಚ್ಚಳ: ಮತ್ತೋರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆ

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರದ ಜೊತೆಗೆ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೀಗ ಮತ್ತೋರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಮಹಾಮಾರಿ ಕೋವಿಡ್ ಗೆ ನಿನ್ನೆಯಷ್ಟೇ 70 ವರ್ಷದ ವೃದ್ಧರು ಬಲಿಯಾಗಿದ್ದರು. ಈ ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಮತ್ತೋರ್ವ ವ್ಯಕ್ತಿಯಲ್ಲಿ ಕೋವಿಡ್ ದೃಢಪಟ್ಟಿದೆ. 72 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಇನ್ನೂ 11 ಜನರ ವರದಿಗಾಗಿ ಆರೋಗ್ಯ ಇಲಾಖೆ ಕಾಯುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular