BREAKING NEWS: ಮತ್ತೊಂದು ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಸೈನಿಕ ತರಬೇತಿ ಶಾಲೆಗೆ ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕ್ರೂಸರ್ ಹಾಗೂ ಬೈಕ್ ಮುಖಾ ಮುಖಿ ಡಿಕ್ಕಿಯಾಗಿ ಯುವಕರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗರಲಗುಂಜಿ ಬಳಿ ಈ ದುರಂತ ಸಂಭವಿಸಿದೆ. ಬೈಕ್ ನಲ್ಲಿದ್ದ 20 ವರ್ಷದ ರಾಮಲಿಂಗ ಮುತ್ಗೇಕರ್ ಹಾಗೂ ಹನುಮಂತ ಪಾಟೀಲ್ ಮೃತ ದುರ್ದೈವಿಗಳು.

ಬೇಕ್ವಾಡ ಗ್ರಾಮದವರಾದ ಇಬ್ಬರೂ ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಶಾಲೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿ ಇಬ್ಬರೂ ಅಸುನೀಗಿದ್ದಾರೆ.
ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read