ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ಹೈಡ್ರಾಮ ನಡೆದಿದ್ದು, ಜಾರಕಿಹೊಳಿ ಬಣ ಹಾಗೂ ಲಕ್ಷ್ಮಣ ಸವದಿ ಬಣಗಳ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ನಡೆಯುತ್ತಿದೆ. ಡೆಲಿಗೇಷನ್ ಫಾರ್ಮ್ ಕೊಡುತ್ತಿಲ್ಲ ಎಂದು ಆರೋಪಿಸಿ ಸವದಿ ಬೆಂಬಲಿಗರು ಗಲಾಟೆ ಆರಂಭಿಸಿದ್ದಾರೆ.
ಜಾರಕಿಹೊಳಿ ಪೆನಲ್ ಅಭ್ಯರ್ಥಿ ಮತದಾನಕ್ಕೆ 40 ಡೆಲಿಗೇಷನ್ ಫಾರ್ಮ್ ಕೊಡುತ್ತಿಲ್ಲ ಎಂದು ಆರೋಪಿಸಿ ಗಲಾಟೆ ಮಾಡಿದ್ದಾರೆ. ಈ ವೇಳೆ ಜಾರಕಿಹೊಳಿ ಬಣ ಹಾಗೂ ಸವದಿ ಬಣಗಳ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಎರಡೂ ಬಣಗಳನ್ನು ಸಮಾಧಾನಪಡಿಸಿದ್ದಾರೆ.