HomeKarnatakaಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಅಪ್ಪಾಸಾಹೇಬ್ ಕುಲಗೋಡೆ ಆಯ್ಕೆ

ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಅಪ್ಪಾಸಾಹೇಬ್ ಕುಲಗೋಡೆ ಆಯ್ಕೆ

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಾಯಕ ಅಪ್ಪಾಸಾಹೇಬ್ ಕುಲಗೋಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ಸಂಬಂಧ ಬೆಳಗಾವಿ ಖಸಗಿ ಹೊತೆಲ್ ನಲ್ಲಿ ನಡೆದ ಸಭೆಯಲ್ಲಿ ಮೊದಲು ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ತಲಾ ಒಬ್ಬೊಬ್ಬರ ಹೆಸರು ಸೂಚಿಸಿದ್ದರು. ಅಂತಿಮವಾಗಿ ನಡೆದ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸೂಚಿಸಿದ ರಾಯಬಾಗ ಮೂಲದ ಅಪ್ಪಾಸಾಹೇಬ್ ಕುಲಗೋಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಇನ್ನು ಡಿಸಿಸಿ ಬ್ಯಂಕ್ ಉಪಾಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಸೂಚಿಸಿದ್ದ ಸುಭಷ್ ಢವಳೇಶ್ವರ್ ಅವರೇ ಮುಂದುವರೆಯಲಿದ್ದಾರೆ. ಜಾರಕಿಹೊಳಿ ಬ್ರದರ್ಸ್ ಒಪ್ಪಂದದಂತೆ ಬೆಳಗಾವಿ ಡಿಸಿಸಿ ಬ್ಯಾಂಕ್ ಗೆ ನೂತನ ಅಧ್ಯಕ್ಷರ ನೇಮಕ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular