HomeKarnatakaರಾಜ್ಯದಲ್ಲಿ ಮತ್ತೆರಡು ಹೊಸ ಜಿಲ್ಲೆಗಳ ಉದಯ: ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆ ಬಗ್ಗೆ ಸಚಿವ ಮಾಹಿತಿ

ರಾಜ್ಯದಲ್ಲಿ ಮತ್ತೆರಡು ಹೊಸ ಜಿಲ್ಲೆಗಳ ಉದಯ: ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆ ಬಗ್ಗೆ ಸಚಿವ ಮಾಹಿತಿ

ಬೆಳಗಾವಿ: ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ, ಗೋಕಾಕ್ ಹೊಸ ಜಿಲ್ಲೆಗಳನ್ನಾಗಿ ರಚಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಲು ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶಾಲ ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಸಾರ್ವಜನಿಕರಿಂದ ತೀವ್ರ ಒತ್ತಡ ಇದ್ದು, ಸಿಎಂ ನಡೆಸಿದ ಸಭೆಯಲ್ಲಿ ಶಾಸಕರು ಕೂಡ ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಜಿಲ್ಲೆ ರಚನೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ವಿಭಜನೆಗೊಂಡಲ್ಲಿ ಬೆಳಗಾವಿ, ಗೋಕಾಕ್ ಮತ್ತು ಚಿಕ್ಕೋಡಿ ಮೂರು ಜಿಲ್ಲೆಗಳಾಗಲಿವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular