HomeLatest NewsBIG NEWS: ಕರ್ನಲ್ ಸೋಫಿಯಾ ಖುರೇಷಿ ಪತಿ ಮನೆ ಮೇಲೆ ದಾಳಿ ಎಂದು ಸುಳ್ಳು ಪೋಸ್ಟ್:...

BIG NEWS: ಕರ್ನಲ್ ಸೋಫಿಯಾ ಖುರೇಷಿ ಪತಿ ಮನೆ ಮೇಲೆ ದಾಳಿ ಎಂದು ಸುಳ್ಳು ಪೋಸ್ಟ್: ಆರೋಪಿ ವಿರುದ್ಧ FIR ದಾಖಲು

ಬೆಳಗಾವಿ: ಕರ್ನಲ್ ಸೋಫಿಯಾ ಖುರೇಷಿ ಪತಿ ಮನೆ ಮೇಲೆ ದಾಳಿಯಾಗಿದೆ ಎಂದು ಸುಳ್ಳು ಪೋಸ್ಟ್ ಮಾಡಿದ್ದ ಆರೋಪಿ ವಿರುದ್ಧ ಬೆಳಗಾವಿ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಆರೋಪಿ ಅನೀಸ್ ವುದ್ದೀನ್ ವಿರುದ್ಧ ಪ್ರಕರಣ ದಾಖಲಾಗಿದೆ. ಕರ್ನಲ್ ಸೋಫಿಯಾ ಖುರೇಷಿ ಪತಿ ಕರ್ನಲ್ ತಾಜುದ್ದೀನ್ ಅವರ ತಂದೆಯ ಮನೆಯಾದ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದ ಮನೆ ಮೇಲೆ ಆರ್.ಎಸ್.ಎಸ್ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಅನೀಸ್ ವುದ್ದೀನ್ ಎಂಬಾತ ಸುಳ್ಳು ಸುದ್ದಿಯನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ.

ಯಾವುದೋ ಹಳೆ ಫೋಟೋವನ್ನು ಬಳಸಿ ಸುಳ್ಳು ಸುದ್ದಿ ಹಬ್ಬಿಸಿದ್ದ. ವಿಷಯ ಗಮನಕ್ಕೆ ಬರುತ್ತಿದ್ದಂತೆ ಗೋಕಾಕ್ ಪೊಲೀಸರು ತಾಜುದ್ದೀನ್ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಈ ವೇಳೆ ಯಾವುದೇ ದಾಳಿ ನಡೆದಿಲ್ಲ ಎಂಬುದು ಖಚಿತವಾಗಿತ್ತು. ಅಲ್ಲದೇ ಸುರಕ್ಷಿತ ಕ್ರಮವಾಗಿ ಮನೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಪರಿಶೀಲನೆ ನಡೆಸುತ್ತಿದ್ದಂತೆ ಆರೋಪಿ ಅನೀಸ್ ವುದ್ದೀನ್ ತನ್ನ ಪೋಸ್ಟ್ ನ್ನು ಡಿಲಿಟ್ ಮಾಡಿದ್ದ. ಸದ್ಯ ಬೆಳಗಾವಿ ಸಿಇಎನ್ ಠಾಣೆಯಲ್ಲಿ ಅನೀಸ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular