ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು ೮ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.
ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಾಥ್ ನೀಡಿದ್ದ ಬೆನ್ನಲ್ಲೇ ಸರ್ಕಾರ ರೈತರೊಂದಿಗೆ ಮಾತುಕತೆಗೆ ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ರೈತ ಮುಖಂಡರ ಜೊತೆ ಹೋರಾಟಗಾರರ ಜೊತೆ ಮಾತುಕತೆ ನಡೆಸಿ ಮನವೊಲಿಸುವ ಯತ್ನ ನಡೆಸಿದರು. ಆದರೆ ಸಚಿವರು ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇಂಫದೂ ಕೂಡ ಕಬ್ಬು ಬೆಳೆಗಾರರು ಹೋರಾಟ ನಡೆಸುತ್ತಿದ್ದಾರೆ.
ಕಬ್ಬು ಬೆಳೆಗಾರರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿ ಮನವರಿಕೆ ಮಾಡಿ. ನಾಳೆ ಸಂಜೆಯೊಳಗೆ ನಿರ್ಧಾರ ತಿಳಿಸುವಂತೆ ರೈತ ಮುಖಂಡರು ಗಡುವು ನೀಡಿದ್ದಾರೆ. ಬೇಡಿಕೆ ಈಡೇರಿಸಿದರೆ ಪ್ರತಿಭಟನೆ ಹಿಂಪಡೆಯುತ್ತೇವೆ. ಇಲ್ಲವಾದಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ, ನವೆಂಬರ್ 7ರಂದು ರಾಷ್ಟ್ರೀಯ ಹೆದ್ದಾರಿ ತಡೆಯುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
