ಬೆಳಗಾವಿ: ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು, ರೈತರು ನಡೆಸುತ್ತಿರುವ ಹೋರಾಟ ೯ನೇ ದಿನಕ್ಕೆ ಕಾಲಿಟ್ಟಿದೆ. ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಪ್ರತಿಭಟನೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಬ್ಬು ಬೆಳೆಗಾರರು ಬೆಳಿಗ್ಗೆಯಿಂದಲೇ ರಸ್ತೆಗಿಳಿದು ಹೋರಾಟ ನಡೆಸುತ್ತಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸರ್ಕಾರ ತಕ್ಷಣ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲು ಎಂದು ಒತ್ತಾಯಿಸಿದ್ದಾರೆ.
ಈ ನಡುವೆ ಹೋರಾಟ ನಿರತ ರೈತರು ಧಾರವಾಡ-ಗೋಕಾಕ್-ಅಥಣಿ ರಸ್ತೆ ತದೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ರೈತರನ್ನು ತಡೆದಿದ್ದಾರೆ. ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
