ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಕಬ್ಬು ಬೆಳೆಗಾರರ ಹೋರಾಟ, ಪ್ರತಿಭಟನೆ ಮುಂದುವರೆದಿದೆ. ರೈತರು ಸರ್ಕಾರದ ವಿರುದ್ಧ ಹೋರಾಟ ಮುಂದುವರೆಸಿದ್ದಾರೆ.
ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡುವಂತೆ ಕಬ್ಬು ಬೆಳೆಗಾರರು ಕಳೆದ 9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ನೀಡಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಹೋರಾಟ ಹಿಂಪಡೆಯಲಾಗಿದೆ. ಆದರೆ ಬೈಲಹೊಂಗಲದಲ್ಲಿ ರೈತರು ಮತ್ತೆ ಪ್ರತಿಭಟನೆ ಮುಂದುವರೆಸಿದ್ದಾರೆ.
ಟನ್ ಕಬ್ಬಿಗೆ 3500 ರೂಪಾಯಿ ದರ ನಿಗದಿ ಮಾಡುವಂತೆ ಒತ್ತಾಯಿಸಿದ್ದಾರೆ. ಇನ್ನೊಂದೆಡೆ ಬೆಳಗವೈಯ ಗುರ್ಲಾಪುರ ಕ್ರಾಸ್ ನಲ್ಲಿಯೂ ರೈತರು ಹೋರಾಟ ಮುಂದುವರೆಸಿದ್ದಾರೆ. ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಗುರ್ಲಾಪುರ ಕ್ರಾಸ್ ನಲ್ಲಿ ರೈತರ ಜೊತೆ ಸಭೆ ನಡೆಸಿ ಮನವೊಲಿಸುವ ಯತ್ನ ನಡೆಸಿದ್ದಾರೆ.
