ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಬೆಳೆಗೆ ಬೆಂಕಿ ತಗುಲಿದ್ದು, 20 ಎಕರೆ ಕಬ್ಬು ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಆರು ಜನ ರೈತರಿಗೆ ಸೇರಿದ 20 ಎಕರೆ ಕಬ್ಬು ಬೆಳೆ ಸುಟ್ಟು ಕರಕಲಾಗಿವೆ. ಕಾಗವಾಡ ತಾಲೂಕಿನ ಉಗಾರ ಬಿ.ಕೆ.ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬಿಸಿಲಿನಿಂದಾಗಿ ಕಬ್ಬಿನ ರವದ್ ಒಣಗಿತ್ತು. ಹೊಲದಲ್ಲಿ ನೇತಾಡುತ್ತಿದ್ದ ವಿದ್ಯುತ್ ತಂತಿಗಳು ಒಂದಕ್ಕೊಂದು ತಾಗಿ ಬೆಂಕಿಯ ಕಿಡಿ ಹೊತ್ತಿಕೊಂಡಿದೆ. ಕಾಗವಾಡದಿಂದ ಅಗ್ನಿ ಶಾಮಕ ದಳದ ವಾಹನ ಬರುವಷ್ಟರಲ್ಲಿ ಕಬ್ಬು ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
