HomeLatest NewsBIG NEWS: ವಿದ್ಯುತ್ ಅವಘಡ: ಕಬ್ಬಿನ ಹೊಲಕ್ಕೆ ಬೆಂಕಿ: 20 ಎಕರೆ ಕಬ್ಬು ಸುಟ್ಟು ಕರಕಲು

BIG NEWS: ವಿದ್ಯುತ್ ಅವಘಡ: ಕಬ್ಬಿನ ಹೊಲಕ್ಕೆ ಬೆಂಕಿ: 20 ಎಕರೆ ಕಬ್ಬು ಸುಟ್ಟು ಕರಕಲು

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಬೆಳೆಗೆ ಬೆಂಕಿ ತಗುಲಿದ್ದು, 20 ಎಕರೆ ಕಬ್ಬು ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ಆರು ಜನ ರೈತರಿಗೆ ಸೇರಿದ 20 ಎಕರೆ ಕಬ್ಬು ಬೆಳೆ ಸುಟ್ಟು ಕರಕಲಾಗಿವೆ. ಕಾಗವಾಡ ತಾಲೂಕಿನ ಉಗಾರ ಬಿ.ಕೆ.ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬಿಸಿಲಿನಿಂದಾಗಿ ಕಬ್ಬಿನ ರವದ್ ಒಣಗಿತ್ತು. ಹೊಲದಲ್ಲಿ ನೇತಾಡುತ್ತಿದ್ದ ವಿದ್ಯುತ್ ತಂತಿಗಳು ಒಂದಕ್ಕೊಂದು ತಾಗಿ ಬೆಂಕಿಯ ಕಿಡಿ ಹೊತ್ತಿಕೊಂಡಿದೆ. ಕಾಗವಾಡದಿಂದ ಅಗ್ನಿ ಶಾಮಕ ದಳದ ವಾಹನ ಬರುವಷ್ಟರಲ್ಲಿ ಕಬ್ಬು ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular