ಬೆಳಗಾವಿ: ಮಹಾರಾಷ್ಟ್ರ ಹಾಗೂ ಪಶ್ಚಿಮಘಟ್ಟ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಗಲ್ಲಿ ಸಪ್ತ ನದಿಗಳು ಪ್ರವಾಹ ರೀತಿಯಲ್ಲಿ ಅಬ್ಬರಿಸಿ ಹರಿಯುತ್ತಿವೆ. ಇದರಿಂದಾಗಿ ಜಿಲ್ಲೆಯ ಹಲವೆಡೆ ಕ್ಷಣ ಕ್ಷಣಕ್ಕೂ ನಿರಿನ ಮಟ್ಟ ಹೆಚ್ಚುತ್ತಿದ್ದು, ಊರಿಗೆ ಊರೇ ಮುಳುಗಡೆಯಾಗಿವೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದ ಬಳಿ ಮಲಪ್ರಭಾ ಪ್ರವಾಹದಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ರಸ್ತೆ ದಾಟುತ್ತಿದ್ದ ಬೈಕ್ ಸವರಾನೊಬ್ಬ ನದಿಯ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ. ತಕ್ಷಣ ಗ್ರಾಮಸ್ಥರು ಹಾಗೂ ಸ್ಥಳೀಯರು ಹಗ್ಗದ ಸಹಾಯದಿಂದ ಬೈಕ್ ಸವಾರನನ್ನು ರಕ್ಷಿಸಿದ್ದಾರೆ.
ಸದ್ಯ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ.