ಬೆಳಗಾವಿ: ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಸಿಪಿಐ ಪುತ್ರ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಪಿಐ ಪುತ್ರ ಅಪ್ರಾಪ್ತ ಅರೋಪಿ, ಸಾಕಿಬ್ ಹಾಗೂ ಇನ್ನೋರ್ವ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಗಳು ಬೆಳಗಾವಿ ಹೊರವಲಯದಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ಅದನ್ನು ರೆಸಾರ್ಟ್ ನ್ನಾಗಿ ಮಾಡಿದ್ದರು. ಅಪ್ರಾಪ್ತ ಬಾಲಕಿಯನ್ನು ರೆಸಾರ್ಟ್ ಗೆ ಕರೆತಂದು ಗ್ಯಾಂಗ್ ರೇಪ್ ನಡೆಸಿದ್ದರು. ಪ್ರಕರಣ ದಾಖಲಗುತ್ತಿದ್ದಂತೆ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಎರಡು ದಿನಗಳ ಹಿಂದೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಎಸ್ಕೇಪ್ ಆಗಿದ್ದ ಉಳಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.