HomeLatest NewsBIG NEWS: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್: CPI ಪುತ್ರ ಸೇರಿ ಮೂವರು ಅರೆಸ್ಟ್

BIG NEWS: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್: CPI ಪುತ್ರ ಸೇರಿ ಮೂವರು ಅರೆಸ್ಟ್

ಬೆಳಗಾವಿ: ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಸಿಪಿಐ ಪುತ್ರ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಪಿಐ ಪುತ್ರ ಅಪ್ರಾಪ್ತ ಅರೋಪಿ, ಸಾಕಿಬ್ ಹಾಗೂ ಇನ್ನೋರ್ವ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿಗಳು ಬೆಳಗಾವಿ ಹೊರವಲಯದಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ಅದನ್ನು ರೆಸಾರ್ಟ್ ನ್ನಾಗಿ ಮಾಡಿದ್ದರು. ಅಪ್ರಾಪ್ತ ಬಾಲಕಿಯನ್ನು ರೆಸಾರ್ಟ್ ಗೆ ಕರೆತಂದು ಗ್ಯಾಂಗ್ ರೇಪ್ ನಡೆಸಿದ್ದರು. ಪ್ರಕರಣ ದಾಖಲಗುತ್ತಿದ್ದಂತೆ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಎರಡು ದಿನಗಳ ಹಿಂದೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಎಸ್ಕೇಪ್ ಆಗಿದ್ದ ಉಳಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular