HomeLatest NewsBIG NEWS: ಬೆಳಗಾವಿ ಗ್ಯಾಂಗ್ ರೇಪ್ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

BIG NEWS: ಬೆಳಗಾವಿ ಗ್ಯಾಂಗ್ ರೇಪ್ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಬೆಳಗಾವಿಯಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಬೆಳಗಾವಿ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದರು.

ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ನಡೆದಿದ್ದು, ಬಹಳ ಹಿಂದೆಯೇ ನಡೆದಿದೆ. ಡಿಸೆಂಬರ್, ಜನವರಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಈವರೆಗೆ ಯಾರೂ ದೂರು ನೀಡಿರಲಿಲ್ಲ. ಈಗ ದೂರು ನೀಡಿದ್ದಾರೆ. ದೂರು ಆಧರಿಸಿ ಈಗಗಾಲೇ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಳಗಾವಿ ಕಮಿಷ್ನರ್ ಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

15 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಆರೋಪದಲ್ಲಿ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ 6 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಸದ್ಯ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular