ಬೆಳಗಾವಿ: ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು, ಮೂವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿಯೊಂದಿಗೆ ನಯವಾಗಿ ಮತನಾಡಿ ಯುವಕರ ಗುಂಪು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದೆ.
ಮೊದಲಿಗೆ ಎಣ್ಣೆಪಾರ್ಟಿ ಮಾಡಿರುವ ಕಾಮುಕರು ಬಳಿಕ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ. ಮೇ 6ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಬಾಅಕಿ ಪೋಷಕರು ಟಿಳಕವಾಡಿ ಠಾಣೆಯಲ್ಲಿ ದೂರು ದಾಖಲಿಸಿದಾರೆ.