HomeKarnatakaBREAKING NEWS: ಬೆಳಗಾವಿಯಲ್ಲಿ ಗುಂಪು ಘರ್ಷಣೆ: 2 ಪ್ರತ್ಯೇಕ ಪ್ರಕರಣ ದಾಖಲು

BREAKING NEWS: ಬೆಳಗಾವಿಯಲ್ಲಿ ಗುಂಪು ಘರ್ಷಣೆ: 2 ಪ್ರತ್ಯೇಕ ಪ್ರಕರಣ ದಾಖಲು

ಬೆಳಗಾವಿ: ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಅನ್ಯಕೋಮಿನ ಯುವಕರು, ಹಿಂದೂಗಳ ಮೇಲೆ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ತಲ್ವಾರ್ ಪ್ರದರ್ಶನ, ಕಲ್ಲುತೂರಾಟ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ.

ಅನ್ಯಕೋಮಿನ 14 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 143, 147, 148, 323, 324, 307 ಹಾಗೂ ಐಪಿಸಿ ಸೆಕ್ಷನ್ 354, 504, 506, 153A, 149 ಅಡಿ 13 ಜನ ಹಿಂದೂಗಳ ಮೇಲೂ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಗುಂಪು ಘರ್ಷಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗೃತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular