ಹಿಂಡಲಗಾ ಜೈಲು ಸಿಬ್ಬಂದಿ ಮೇಲೆ ಕೈದಿ ಹಲ್ಲೆ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲು ಸಿಬ್ಬಂದಿ ಮೇಲೆ ಕೈದಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಜೈಲಿನ ವಾರ್ಡನ್ ವಿನೋದ್ ಲೋಕಾಪುರ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಹಿಲ್ ಅಲಿಯಾಸ್ ರೋಹನ್ ಎಂಬಾತ ಹಲ್ಲೆ ನಡೆಸಿದ್ದಾನೆ. ಹಾಸನದಿಂದ ಗಡಿ ಪಾರಾಗಿ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಿರುವ ಕೈದಿ ರೋಹನ್ ಗೆ ಜೈಲಿನ ನಿಯಮ ಪಾಲಿಸಲು ಹೇಳಿದ್ದಕ್ಕೆ ಹಲ್ಲೆ ಮಾಡಿದ್ದಾನೆ. ಅತಿ ಭದ್ರತಾ ವಿಭಾಗದಲ್ಲಿರುವ ಕೈದಿ ರೋಹನ್ ಜೈಲಿನ ಒಳಗಿರುವ ಆಸ್ಪತ್ರೆಗೆ ತೆರಳಲು ಸಿಬ್ಬಂದಿ ಬಳಿ ಅನುಮತಿ ಕೇಳಿದ್ದಾನೆ.

ಆತನಿಗೆ ತಡವಾಗಿ ಅನುಮತಿ ನೀಡಿದ್ದರಿಂದ ಕೋಪಗೊಂಡು ವಾರ್ಡನ್ ವಿನೋದ್ ಗೆ ಕಾಲಿನಿಂದ ಒದ್ದು ಕೈಯಿಂದ ಹಿಗ್ಗಾಮುಗ್ಗಾ ಹೊಡೆದು ಹಲ್ಲೆ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡ ವಾರ್ಡನ್ ವಿನೋದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ ವಹಿಸಿದ್ದಾರೆ. ಕೈದಿಗಳ ಗೂಂಡಾಗಿರಿಯಿಂದ ಸಿಬ್ಬಂದಿ ಭಯಪಡುವಂತಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read