HomeKarnatakaBREAKING NEWS: ಮಳೆ ಅವಾಂತರ: ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

BREAKING NEWS: ಮಳೆ ಅವಾಂತರ: ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

ಬೆಳಗಾವಿ: ರಾಜ್ಯಾದ್ಯಂತ ವರುಣಾರ್ಭಟ ಹೆಚ್ಚುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಧಾರಾಕಾರ ಮಳೆಗೆ ಪಕ್ಕದ ಮನೆಯ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ.

ಜಿಲ್ಲೆಯಾದ್ಯಂತ ರಾತ್ರಿಯಿಡಿ ಮಳೆ ಸುರಿದಿದ್ದು, ನಿಪ್ಪಾಣಿ ಬಳಿಯ ಜತ್ರಾಟ್ ವೇಸ್ ಎಂಬಲ್ಲಿ ತಡ ರಾತ್ರಿ ಮನೆಯ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಮನೆಯ ಪಕ್ಕದಲ್ಲಿ ಶೆಡ್ ನಲ್ಲಿ ವಾಸವಾಗಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ತಿರುಪತಿ (45) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ತಹಶೀಲ್ದಾರ್, ಉಪ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular