HomeKarnatakaBIG NEWS: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ; ಪತಿ ಅರೆಸ್ಟ್

BIG NEWS: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ; ಪತಿ ಅರೆಸ್ಟ್

ಬೆಳಗಾವಿ: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಹೇಳಿ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಪತಿ ಮಹಾಶಯನೊಬ್ಬ ಹೆಂಡತಿಗೆ ಹೆದರಿಸುತ್ತಿದ್ದ. ಬೆಳಗಾವಿ ನಗರದ ಕಿರಣ್ ಪಾಟೀಲ್ ಎಂಬಾತ ತಾನು ಮತ್ತೊಂದು ಮದುವೆಯಾಗುವ ದುರುದ್ದೇಶಕ್ಕೆ ಪತ್ನಿಗೆ ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕಿ ಹಿಂಸಿಸುತ್ತಿದ್ದ.

ಗಂಡನ ಮನವೊಲಿಕೆಗೆ ಪತ್ನಿ ಹಲವು ಬಾರಿ ಯತ್ನಿಸಿದ್ದರೂ ಕಿರುಕುಳ ಮಾತ್ರ ನಿಂತಿರಲಿಲ್ಲ. ಬಳಿಕ ವಿಚ್ಛೇದನ ಕೋರಿ ಕಿರಣ್ ಕೋರ್ಟ್ ಮೆಟ್ಟಿಲೇರಿದ್ದ. ಆದರೂ ವಿಚ್ಛೇಧನಕ್ಕೆ ಪತ್ನಿ ಒಪ್ಪದಿದ್ದಾಗ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುತ್ತೇನೆ ಎಂದು ಕಿರಾತಕ ಬ್ಲ್ಯಾಕ್ ಮೇಲ್ ಮಾಡಿದ್ದ. ಪತಿಯ ಕಾಟದಿಂದ ನೊಂದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ಕಿರಣ್ ನನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಆತನ ಮೊಬೈಲ್ ನಲ್ಲಿ ಪತ್ನಿಯೊಂದಿಗಿನ ಕೆಲ ಖಾಸಗಿ ಕ್ಷಣಗಳ ವಿಡಿಯೋ, ಫೋಟೋಗಳಿದ್ದು, ಬೆದರಿಕೆ ಹಾಕುತ್ತಿರುವುದು ಸಾಬೀತಾಗಿದೆ. ತನ್ನನ್ನು ಪೊಲೀಸರು ಬಂಧಿಸುತ್ತಾರೆ ಎಂಬುದು ತಿಳಿಯುತ್ತಿದ್ದಂತೆ ಕಿರಣ್ ಎಸ್ಕೇಪ್ ಆಗಲು ಯತ್ನಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು, ಬಿಡುಗಡೆಯಾಗುತ್ತಿದ್ದಂತೆ ಅರೆಸ್ಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular