HomeKarnatakaBIG NEWS: ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಲೋಕಸಭಾ ಬಿಜೆಪಿ ಟಿಕೆಟ್ ಫೈನಲ್

BIG NEWS: ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಲೋಕಸಭಾ ಬಿಜೆಪಿ ಟಿಕೆಟ್ ಫೈನಲ್

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರು ಘೋಷಣೆಯಾಗದ ಹಿನ್ನೆಲೆಯಲ್ಲಿ ನಿರಾಶರಾಗಿದ್ದರು. ಆದರೆ ಈಗ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಶೆಟ್ಟರ್ ಹೆಸರು ಫೈನಲ್ ಆಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಂಸದೆ ಮಂಗಳಾ ಅಂಗಡಿ ಮಾಹಿತಿ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಮಂಗಳಾ ಅಂಗಡಿ, ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಲೋಕಸಭಾ ಟಿಕೆಟ್ ಫೈನಲ್ ಆಗಿದೆ. ಶೆಟ್ಟರ್ ಗೆ ಟಿಕೆಟ್ ಫೈನಲ್ ಆಗಿದೆ ಎಂದು ಗೊತ್ತಾಗಿ ನಾವು ದೆಹಲಿಯಿಂದ ವಾಪಾಸ್ ಆಗಿದ್ದೇವೆ ಎಂದರು.

ಬಿಜೆಪಿ ಎರಡನೇ ಲಿಸ್ಟಿನಲ್ಲಿ ನಮ್ಮ ಕುಟುಂಬದ ಹೆಸರು ಇರಲಿಲ್ಲ. ಹಾಗಾಗಿ ನಾವು ಹೈಕಮಾಂಡ್ ಭೇಟಿಯಾಗಿದ್ದೆವು. ಶೆಟ್ಟರ್ ಮೊದಲು ಬೆಳಗಾವಿಯಿಂದ ಟಿಕೆಟ್ ಬೇಡ ಎಂದಿದ್ದರು. ಅವರು ಧಾರವಾಡ ಅಥವಾ ಹಾವೇರಿ ಟಿಕೆಟ್ ಕೇಳಿದ್ದರು.ಆದರೆ ವರಿಷ್ಠರು ಬೆಳಗಾವಿಯಿಂದ ನೀವೇ ನಿಂತುಕೊಳ್ಳಿ ಎಂದು ಹೇಳಿದ್ದರಂತೆ. ಹಾಗಾಗಿ ಶೆಟ್ಟರ್ ಗೆ ಬೆಳಗಾವಿ ಟಿಕೆಟ್ ಫೈನಲ್ ಆಗಿದೆ. ಶೆಟ್ಟರ್ ಗೆ ಟಿಕೆಟ್ ಕೊಟ್ಟರೆ ಅವರ ಜೊತೆ ಪ್ರಚಾರ ಮಾಡುತೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳಿಗೆ ಟಿಕೆಟ್ ಕೊಡಬೇಕು ಎನ್ನುವುದು ನನ್ನ ಆಸೆಯಾಗಿತ್ತು. ಟಿಕೆಟ್ ಸಿಗದಿರುವುದಕ್ಕೆ ಸ್ವಲ್ಪ ಬೇಸರವಾಗಿದೆ. ಶೆಟ್ಟರ್ ಸ್ಪರ್ಧಿಸಿದರೆ ಅವರ ಪರ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular