ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪರೇಡ್ ವೀಕ್ಷಣೆಗೆ ತೆರಳುವ ಜೀಪ್ ಡಿಸೇಲ್ ಸೋರಿಕೆಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಸ್ವಲ್ಪದರಲ್ಲಿ ದೊಡ್ಡ ಅನಾಹುತ ತಪ್ಪಿದೆ.
ಧ್ವಜಾರೋಹಣ ಬಳಿಕ ಪರೇಡ್ ವೀಕ್ಷಣೆಗೆ ಹೋಗುವಾಗ ಸಚಿವರು ಜೀಪ್ ಏರುವ ಮುನ್ನ ಡಿಸೇಲ್ ಸೋರಿಕೆಯಾಗಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಹೊತ್ತದಂತೆ ಫೈಯರ್ ಕಂಟ್ರೋಲ್ ಗ್ಯಾಸ್ ಸಿಂಪಡಿಸಿ, ಜೀಪ್ ತಳ್ಳಿಕೊಂಡು ಮೈದಾನದಿಂದ ಹೊರ ತೆಗೆದುಕೊಂಡು ಹೋಗಿದ್ದಾರೆ.
ಪರಿವೀಕ್ಷಣೆ ಇಲ್ಲದೇ ಆಕರ್ಷಕ ಪಥಸಂಚನ ಮಾತ್ರ ವೀಕ್ಷಣೆ ಆಗಿಮಿಸದ್ದ ಸಚಿವ ಸತೀಶ್ ಪೊಲೀಸರು, ಕೆಎಸ್‌ಆರ್‌ಪಿ ತುಕಡಿ, ಎನ್‌ಸಿಸಿ, ಸ್ಕೌಟ್ಸ್ ಸೇರಿ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚನ ನಡೆಸುವ ಮುನ್ನ ಘಟನೆ ನಡೆದಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳದೆ ಜಿಲ್ಲಾಡಳಿತದಿಂದ ಈ ಎಡವಟ್ಟು ಸಂಭವಿಸಿದೆ.
