ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರ ಕಾರು ಚಾಲಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಕ್ಯಾಅಂಪ್ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ್, ಮೌನಪ್ಪ, ಸಂಪತ್ ಎಂದು ಗುರುತಿಸಲಾಗಿದೆ. ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕ ಬಸವಂತ್ ಕಡೋಲ್ಕರ್ ಎಂಬುವವರಿಗೆ ನಿನ್ನೆ ಮಂಗಳವಾರ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿರುವ ಬಸವಂತ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸವಂತ್ ಅವರ ಸ್ನೇಹಿತ ಮದನ್ ಎಂಬುವವರು, ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.

