HomeKarnatakaBREAKING: ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ: KSRTC ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು...

BREAKING: ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ: KSRTC ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ: ಗಣೇಶ ಹಬ್ಬದ ಸಂದರ್ಭದಲ್ಲೇ ರಾಜ್ಯದಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಮಂಡ್ಯದಲ್ಲಿ ಹಾಲಿನ ಟ್ಯಾಂಕರ್ ಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಅತ್ತ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೆ.ಎಸ್.ಆರ‍್.ಟಿ.ಸಿ ಬಸ್ ಗೆ ಮೂವರು ಬಲಿಯಾಗಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಹೊರವಲಯದಲ್ಲಿ ನಡೆದಿದೆ. ಗಣೇಶ ಮೂರ್ತಿ ಮೆರವಣಿಗೆ ನೋಡಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸವದತ್ತಿಯಿಂದ ಧಾರವಾಡಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಧಾರವಾಡದಿಂದ ಸವದತ್ತಿ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಸವದತ್ತಿ ಪಟ್ಟಣದ ನಿವಾಸಿಗಳಾದ ವಿನೋದ್ ಹೋಗೆನ್ನವರ್ (22), ಆಕಾಶ್ ಜಾದವ್ (21), ರವಿ ಕುರುಬರ (21) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ಭೇಯ್ಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಣೇಶ ಹಬ್ಬ ಮುಗಿಸಿ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ: ಮೂವರು ಸಾವು

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲೇ ರಾಜ್ಯದಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಊರಿನಲ್ಲಿ ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಟ್ಯಾಂಕರ್ ಹಾಗೂ ಬೈಕ್ ನಡಿವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಮೃತಪಟ್ಟಿದ್ದಾರೆ.

ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಸ್ಕೂಟರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಬಳಿ ಈ ದುರಂತ ಸಂಭವಿಸಿದೆ. ಇಂದು ಮೃತರನ್ನು ಕೊಪ್ಪ ಗ್ರಾಮದ ನಿವಾಸಿಗಳಾದ ಕಾವ್ಯಾ, ಮುತ್ತುರಾಜ್ ಮತ್ತು ಕೀರ್ತನಾ ಎಂದು ಗುರುತಿಸಲಾಗಿದೆ.

ಮೃತ ಮೂವರೂ ಗೌರಿ-ಗಣೇಶ ಹಬ್ಬದ ಆಚರಣೆಗಾಗಿ ತಮ್ಮ ಸ್ವಗ್ರಾಮವಾದ ಕೊಪ್ಪಕ್ಕೆ ಹೋಗಿದ್ದರು. ಹಬ್ಬ ಮುಗಿಸಿ ಇಂದು ಮುಂಜಾನೆ ಸ್ಕೂಟರ್‌ನಲ್ಲಿ ಬೆಂಗಳೂರಿಗೆ ಹೊರಟಿದ್ದರು. ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಬಳಿ ಹಾಲಿನ ಟ್ಯಾಂಕರ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರೂ ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular