ಬೆಳಗಾವಿ: ಮಹಾರಾಷ್ಟ್ರ, ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಬೆಳಗಾವಿ, ಬಾಗಲಕೋಟೆ ಸೇರಿದಂತೆ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.
ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಬಿಡಲಾಗಿದೆ. ಇದರಿಂದಾಗಿ ನದಿಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮಸ್ಥರಿಗೆ ಮುಳುಗಡೆ ಭೀತಿ ಎದುರಾಗಿದೆ.
ಕೃಷ್ಣಾ ನದಿ ಪ್ರವಾಹದಿಂದಾಗಿ ಮಹಾರಾಷ್ಟ್ರ-ಕರ್ನಾಟಕ ಸಂಪರ್ಕ ಕಲ್ಪಿಸುವ ಕುಡುಚಿ ಉಗಾರ ಸೇತುವೆ ಮುಳುಗಡೆಯಾಗಿವೆ. ರಾಯಬಾಗ ತಾಲೂಕಿನ ಕುಡುಚಿ-ಉಗಾರ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಸಂಚಾರ ನಿಷೇಧಿಸಲಾಗಿದೆ. ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿ ಭದ್ರತೆಗೆ ನಿಯೋಜಿಸಿದ್ದಾರೆ. ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.