BREAKING: ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪಕ!

ಬೆಳಗಾವಿ: ಲಂಚದ ಹಣಕ್ಕೆ ಕೈಯ್ಯೊಡ್ಡಿದಾಗಲೇ ಲ್ಯಾಂಡ್ ಸರ್ವೇಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ನಡೆದಿದೆ.

ಭೂ ಮಾಪಕ ಬಸವರಾಜ್ ಕಡಲಗಿ ಲೋಕಾಯುಕ್ತ ಬಲೆಗೆ ಬಿದ್ದವರು. 11E ನಕ್ಷೆ ತಯಾರಿ ಮಾಡಿಕೊಡಲು ಭೂ ಮಾಪಕ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪ್ರಕಾಶ್ ಮೈಲಾಕಿ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಇದೀಗ ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಭೂ ಮಾಪಕನನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read