HomeLatest NewsBREAKING: ಬಾಗಲಕೋಟೆ, ಗದಗ ಬಳಿಕ ಬೆಳಗಾವಿಯಲ್ಲಿಯೂ ಮೂರು ಕಡೆ ಲೋಕಾಯುಕ್ತ ದಾಳಿ

BREAKING: ಬಾಗಲಕೋಟೆ, ಗದಗ ಬಳಿಕ ಬೆಳಗಾವಿಯಲ್ಲಿಯೂ ಮೂರು ಕಡೆ ಲೋಕಾಯುಕ್ತ ದಾಳಿ

ಬೆಳಗಾವಿ: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬಾಗಲಕೋಟೆ, ಗದಗ, ಹಾವೇರಿ ಬಳಿಕ ಇದೀಗ ಬೆಳಗಾವಿ ಜಿಲ್ಲೆಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದೇವರಾಜ್ ಅರಸು ಅಭಿವೃದ್ಧಿ ನಿಗದ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇವರಾಜ್ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ ಅವರ ಬೆಳಗಾವಿಯ ವಿದ್ಯಾನಗರದಲ್ಲಿರುವ ನಿವಾಸ, ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular