HomeKarnatakaಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ಯುವತಿಗೆ ಮೋಸ: ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್: 19 ಲಕ್ಷ...

ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ಯುವತಿಗೆ ಮೋಸ: ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್: 19 ಲಕ್ಷ ರೂಪಾಯಿ ಕಳೆದುಕೊಂಡ ಸಂತ್ರಸ್ತೆ

ಬೆಳಗಾವಿ: ಪ್ರೀತಿ-ಪ್ರೇಮದ ಹೆಸರಲ್ಲಿ ಮದುವೆಯಾಗುವುದಾಗಿ ನಂಬಿಸಿದ್ದ ಯುವಕನೊಬ್ಬ ಯುವತಿಗೆ ಕೈಕೊಟ್ಟಿದ್ದಲ್ಲದೇ ಬ್ಲ್ಯಾಕ್ ಮೇಲ್ ಮಾಡಿ ೧೯ ಲಕ್ಷ ರೂಪಾಯಿ ದೋಚಿರುವ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ.

ಮದುವೆಯಾಗುವುದಾ ನಂಬಿಸಿ ಯುವತಿಯೊಂದಿಗೆ ಸುತ್ತಾಡಿ, ಆಕೆಯ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಲಕ್ಷ ಲಕ್ಷ ಹಣ ಹಾಗೂ ಚಿನ್ನಾಭರಣವನ್ನು ವ್ಯಕ್ತಿ ಲೂಟಿ ಮಾಡಿದ್ದಾನೆ. ಬೆಳಗಾವಿಯ ಮಾಧವಾ ಕಾಲೋನಿ ನಿವಾಸಿ ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂಜರ್ ಎಂಬಾತ ಈ ರೀತಿ ಕೃತ್ಯವೆಸಗಿದ್ದಾನೆ.

ಫೇಸ್‌ಬುಕ್ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿದ್ದ ಈತ, ಬಳಿಕ ಯುವತಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿ, ಮದುವೆಯಾಗುವುದಾಗಿ ನಂಬಿಸಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಯುವತಿಗೆ ತಿಳಿಯದಂತೆ ಖಾಸಗಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ಯುವತಿಯಿಂದ ಹಂತ ಹಂತವಾಗಿ 19 ಲಕ್ಷ ರೂಪಾಯಿ ಹಣ ದೋಚಿದ್ದಾನೆ. ಸಂತ್ರಸ್ತೆಯ ತಾಯಿಯ ಚಿನ್ನ ಹಾಗೂ ತಂದೆಯ ಎಫ್‌ಡಿ ಹಣವನ್ನೂ ಈತ ಲೂಟಿ ಮಾಡಿದ್ದಾನೆ.

ಸುಮಾರು 150 ಗ್ರಾಂ ಚಿನ್ನಾಭರಣ ಹಾಗೂ 19 ಲಕ್ಷ ರೂಪಾಯಿಗಳನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿಕೊಂಡಿದ್ದಾನಂತೆ. ಅಷ್ಟೇ ಅಲ್ಲದೆ, ಆರೋಪಿ ಯುವಕನ ತಾಯಿ 3 ಕೋಟಿ ರೂಪಾಯಿ ಕೊಟ್ಟರೆ ಮಾತ್ರ ಮದುವೆ ಮಾಡಿಕೊಳ್ಳುತ್ತೇವೆ ಎಂದು ಡಿಮ್ಯಾಂಡ್ ಇಟ್ಟಿರುವುದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಶಹಾಪುರ ಠಾಣೆಯಲ್ಲಿ ದೂರು ನೀಡಿದ್ದೇನೆ. ಆದರೆ ಈ ಪ್ರಕರಣದಲ್ಲಿ ಶಹಾಪುರ ಠಾಣೆ ಪೊಲೀಸರ ನಡೆ ಸಂಶಯಾಸ್ಪದವಾಗಿದೆ.ಬ್ಯಾಂಕ್‌ನಿಂದ ರಿಕವರಿ ಮಾಡಿದ್ದ ಚಿನ್ನವನ್ನು ಮರಳಿ ಯುವಕನಿಗೇ ಕೊಟ್ಟು ಕಳುಹಿಸಿದ್ದಾರೆ ಹಾಗೂ ಆರೋಪಿಗಳ ಜೊತೆ ಪೊಲೀಸರು ಶಾಮೀಲಾಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ನೊಂದ ಯುವತಿ ನ್ಯಾಯಕ್ಕಾಗಿ ಇಂದು ಕಮಿಷನರ್ ಕಚೇರಿಗೆ ಆಗಮಿಸಿ ದೂರು ನೀಡಿದ್ದು, ತನಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾಳೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular