ಬಾಣಂತಿ-ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ: ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ: ಬೆಳಗಾವಿಯಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಾಣಂತಿ-ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಆಸ್ಪತ್ರೆಯಲ್ಲಿ ಯಾವುದೇ ಕುಂದು ಕೊರತೆಗಳು ಕಂಡು ಬಂದಲ್ಲಿ ಸರ್ಕಾರದ ಗಮನಕ್ಕೆ ತರುವಂತೆ ಸೂಚಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಜೊತೆಗೂಡಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆ (ಬಿಮ್ಸ್)ಗೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿವಿಧ ಘಟಕಗಳಿಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಸಭೆ ನಡೆಸಿ, ಕುಂದು‌ ಕೊರತೆಗಳ ಬಗ್ಗೆ ವಿಚಾರಿಸಿದರು.

ಬಾಣಂತಿಯರು ಹಾಗೂ ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಬಿಮ್ಸ್ ಗೆ ಉತ್ತಮ ಹೆಸರು ತರಲು ಎಲ್ಲರೂ ಪ್ರಯತ್ನಿಸಬೇಕು ಎಂದು ತಿಳಿಸಿದರು‌.

ಇದೇ ವೇಳೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮೂರು ದಿನದ ನವಜಾತ ಹೆಣ್ಣು ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಆರೂವರೆ ತಿಂಗಳ ಗರ್ಭಿಣಿ ಕಾಲು ಜಾರಿ ಬಿದ್ದಿದ್ದಾರೆ. ತೀವ್ರ ನೋವಿನ ಕಾರಣಕ್ಕೆ ಬೈಲಹೊಂಗಲ ಆಸ್ಪತ್ರೆಗೆ ದಾಖಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್‌ಗೆ ಕರೆ ತರಲಾಗಿತ್ತು. ಮಗುವಿನ ಅಂಗಾಂಗ ಬೆಳವಣಿಗೆ ಆಗಿರಲಿಲ್ಲ, ಆದರೂ ಸಮರ್ಪಕ ಚಿಕಿತ್ಸೆ ನೀಡಲಾಗಿತ್ತು. ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿ ಬಿಟ್ಟು ತಾಯಿ ಪರಾರಿ ಆಗಿದ್ದು ದುರ್ದೈವ. ಈಗಾಗಲೇ ಎಫ್ಐಆರ್ ದಾಖಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read