ಬೆಳಗಾವಿ: ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಳಗಾವಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ.
ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿಯ ಬಾಡಿಗೆ ಮನೆಯಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಡರಾತ್ರಿ ಈ ಘಟನೆ ನಡೆದಿದೆ. ಮಹಾದೇವಿ ಕರೆನ್ನವರ್ (45) ಕೊಲೆಯಾದ ಮಹಿಳೆ.
ಮಗನೊಂದಿಗೆ ಮಹಾದೇವಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎರಡು ದಿನಗಳ ಹಿಂದೆ ಮಗ ಊರಿಗೆ ಹೋಗಿಬರುತ್ತೇನೆ ಎಂದು ಊರಿಗೆ ಹೋಗಿದ್ದ. ತಡರತರಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮಹಿಳೆಯನ್ನು ಕೊಲೆಗೈದು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬೆಳಗಾವಿನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ, ಡಿಸಿಪಿ ನಾರಾಯಣ್ ಭರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಿಳೆಯ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.