ಬೆಳಗಾವಿ : ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗಜೇಂದ್ರ ವಣ್ಣೂರೆ (60) ಹಾಗೂ ದ್ರಾಕ್ಷಾಯಿಣಿ ವಣ್ಣೂರು (48) ಎಂದು ಗುರುತಿಸಲಾಗಿದೆ. ಜುಲೈ 7 ರ ಮಧ್ಯರಾತ್ರಿ ದುಷ್ಕರ್ಮಿಗಳು ಕೊಲೆ ಮಾಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನಿನ್ನೆಯಿಂದ ಮನೆಯ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರು ಇಂದು ಅನುಮಾನಗೊಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಓಪನ್ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯಮಕನಮರಡಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.