HomeCrimeBREAKING NEWS: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ: ಪ್ರೇಯಸಿಯ ಕತ್ತು ಸೀಳಿ ಕೊಲೆಗೈದ ಯುವಕ:...

BREAKING NEWS: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ: ಪ್ರೇಯಸಿಯ ಕತ್ತು ಸೀಳಿ ಕೊಲೆಗೈದ ಯುವಕ: ಅದೇ ಚಾಕುವಿನಿಂದ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ

ಬೆಳಗಾವಿ: ಪ್ರೇಯಸಿಯನ್ನು ಬರ್ಬರವಾಗಿ ಕೊಲೆ ಮಾಡಿ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ.

ಐಶ್ವರ್ಯಾ ಮಹೇಶ್ ಲೋಹಾರ(18) ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪ್ರಿಯಕರ ಪ್ರಶಾಂತ ಯಲ್ಲಪ್ಪ ಕುಂಡೇಕರ(29) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಂಜೆ 5 ಗಂಟೆಗೆ ಐಶ್ವರ್ಯಾ ಚಿಕ್ಕಮ್ಮನ ಮನೆಗೆ ಇವರು ಬಂದಿದ್ದರು. ಮೊದಲು ಐಶ್ವರ್ಯಾ, ಪ್ರಶಾಂತ್ ವಿಷ ಸೇವಿಸಲು ಯತ್ನಿಸಿದ್ದರು. ನಂತರ ಚಾಕುವಿನಿಂದ ಪ್ರೇಯಸಿ ಐಶ್ವರ್ಯಾ ಕತ್ತು ಸೀಳಿ ಕೊಲೆ ಮಾಡಿದ ಪ್ರಶಾಂತ್ ಬಳಿಕ ಅದೇ ಚಾಕುವಿನಿಂದ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳಗಾವಿಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular