ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ರಾಷ್ಟ್ರ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾ ಅನಾವರಣಗೊಳಿಸಿದರು.
ಸುವರ್ಣ ಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಬೃಹತ್ ಖಾದಿ ತ್ರಿವರ್ಣಧ್ವಜವನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಸಚಿವರುಗಳು ಭಾಗವಹಿಸಿದ್ದರು.
ಈ ಧ್ವಜವನ್ನು ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ತಮ್ಮ ಆಸಕ್ತಿಯಿಂದ ಮಾಡಿದ್ದಾರೆ.
