HomeKarnatakaಕಟ್ಟಡ ಕಾರ್ಮಿಕ, ಆಟೋ ಚಾಲಕ, ಪೌರಕಾರ್ಮಿಕ ಮಹಿಳೆ ಸೇರಿ 5 ಕಾಯಕ ಯೋಗಿಗಳಿಂದ ಪ್ರಧಾನಿ ಮೋದಿಗೆ...

ಕಟ್ಟಡ ಕಾರ್ಮಿಕ, ಆಟೋ ಚಾಲಕ, ಪೌರಕಾರ್ಮಿಕ ಮಹಿಳೆ ಸೇರಿ 5 ಕಾಯಕ ಯೋಗಿಗಳಿಂದ ಪ್ರಧಾನಿ ಮೋದಿಗೆ ಸ್ವಾಗತ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಿ ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿದ್ದಾರೆ.

ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ಬೆಳಗಾವಿ ನಗರ ಸಜ್ಜಾಗಿದೆ. ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಲಿರುವ ಪ್ರಧಾನಿಯವರು ಇಂದು 10.5 ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ. ಬೆಳಗಾವಿಯ ರೈಲು ನಿಲ್ದಾಣ ಜೋಡಿ ರೈಲು ಮಾರ್ಗ ಲೋಕಾರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸುವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿಯವರ ರೋಡ್ ಶೋ ಸಂದರ್ಭದಲ್ಲಿ ಜನಸಾಮಾನ್ಯರು ಮತ್ತು ಅಭಿಮಾನಿಗಳು ದೇಶದ 29 ರಾಜ್ಯಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳ ವೇಷಭೂಷಣ ಧರಿಸಿ ಪ್ರಧಾನಿಯವರಿಗೆ ಶುಭ ಕೋರಲಿದ್ದಾರೆ. ಕೇಸರಿ ಪೇಟ ತೊಟ್ಟು 10,000 ಮಹಿಳೆಯರು ಪೂರ್ಣ ಕುಂಭ ಸ್ವಾಗತ ನೀಡಲಿದ್ದಾರೆ.

ಇನ್ನು ಪ್ರಧಾನಿ ರೋಡ್ ಶೋ ಸಂದರ್ಭದಲ್ಲಿ ಬೆಳಗಾವಿಯ ಚೆನ್ನಮ್ಮ ವೃತ್ತ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಐದು ಜನ ಕಾಯಕಯೋಗಿಗಳು ವಿಶೇಷ ಸ್ವಾಗತ ನೀಡಲಿದ್ದಾರೆ. ಆಟೋ ಚಾಲಕ ಮಯೂರ ಚೌಹಾಣ್, ಪೌರಕಾರ್ಮಿಕ ಮಹಿಳೆ ಮೀನಾಕ್ಷಿ ತಳವಾರ, ನೇಕಾರ ಕಲ್ಲಪ್ಪ ಟೋಪಗಿ, ರೈತ ಮಹಿಳೆ ಶೀಲಾ, ಕಟ್ಟಡ ಕಾರ್ಮಿಕ ಮಂಗೇಶ ಅವರು ಪ್ರಧಾನಿಯವರಿಗೆ ಸ್ವಾಗತ ನೀಡುವರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular