ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಅನಾಹುತಗಳು ಸಂಭವಿಸುತ್ತಿವೆ. ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದರೆ. ಮತ್ತೊಂದೆಡೆ ಮನೆ ಮೇಲ್ಛಾವಣಿ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗೋಕಾರ್ ನಲ್ಲಿ ಮನೆ ಗೋಡೆ ಕುಸಿದು ಪರಿದಾಬಾನು (50) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತೊಂದೆಡೆ ಧಾರಾಕಾರ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಕುಸಿದು ಬಿದು ವ್ಯಕ್ತಿ ಸಾವನ್ನಪ್ಪಿದ್ದಾರೆ. ರಾಮದುರ್ಗ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ವಾಮನ್ ರಾವ್ ಬಾಪೂ ಪವಾರ್ (75) ಮೃತರು. ಮನೆಯಲ್ಲಿ ಮಲಗಿದ್ದ ವೇಳೆ ಮೇಲ್ಛಾವಣೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಅವಸೇಷಗಳ ಅಡಿ ಸಿಲುಕಿ ಸಾವನ್ನಪ್ಪಿದ್ದಾರೆ.
ಘಟನಾಸ್ಥಳಕ್ಕೆ ರಾಮದುರ್ಗ ಅಗ್ನಿಶಾಮಕ ದಳದ, ಪೊಲೀಸ್ ಸಿಬ್ಬಂದಿ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.