ಬೆಳಗಾವಿ: ಬೆಂಗಳೂರಿನಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ರೀಲ್ಸ್ ಗಾಗಿ ಮಚ್ಚು ಹಿಡಿದು ಪೋಸ್ ಕೊಟ್ಟಿದ್ದಕ್ಕೆ ಅರೆಸ್ಟ್ ಆಗಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಅತ್ತ ಕುಂದಾನಗರಿ ಬೆಳಗಾವಿಯಲ್ಲಿಯೂ ಇಂತದ್ದೇ ಘಟನೆ ನಡೆದಿದೆ.
ಯುವಕರು ಏರಿಯಾದಲ್ಲಿ ಹವಾ ಕ್ರಿಯೇಟ್ ಮಾಡಲು ಮಚ್ಚು ಹಿಡಿದು ಡೈಲಾಗ್ ಹೊಡೆದು ಪೋಸ್ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್, ಮಚ್ಚು ಹಿಡಿದು ರೀಲ್ಸ್ ಮಾಡಿದ ಯುವಕರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.