HomeKarnatakaBREAKING: ಅಧಿವೇಶನದಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಚರ್ಚೆಗೆ ಆದ್ಯತೆ: ಪರಿಷತ್ ನಲ್ಲಿ 1397 ಪ್ರಶ್ನೆಗಳ ಸ್ವೀಕಾರ:...

BREAKING: ಅಧಿವೇಶನದಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಚರ್ಚೆಗೆ ಆದ್ಯತೆ: ಪರಿಷತ್ ನಲ್ಲಿ 1397 ಪ್ರಶ್ನೆಗಳ ಸ್ವೀಕಾರ: ಸಭಾಪತಿ ಹೊರಟ್ಟಿ

ಬೆಳಗಾವಿ: ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ಯ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಬೆಳಗಾವಿ ಅಧಿವೇಶನ ಯಶಸ್ವಿಗೆ ಹಾಗೂ ಪರಿಷತ್ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ವಿಧಾನ ಪರಿಷತ್ ಸದಸ್ಯರಿಗೆ ಈಗಾಗಲೇ ಅನೇಕ ಸಲಹೆಗಳನ್ನು ನೀಡಲಾಗಿದೆ. ಈ ಬಾರಿ ಪರಿಷತ್ತಿನಲ್ಲಿ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ ಪ್ರಶ್ನೆಗಳು ಹಾಗೂ 81 ಗಮನ ಸೆಳೆಯುವ ಸೂಚನೆಗಳು ಬಂದಿರುತ್ತವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲ ವಾರ ಮಂಗಳವಾರ ಹಾಗೂ ಬುಧವಾರಗಳಂದು ಯುಕೆಪಿ, ಮಹಾದಾಯಿ, ರೈತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತ‌ ಚರ್ಚೆಗಳಿಗೆ ಒತ್ತು‌ ನೀಡಲಾಗುವುದು. ಅಧಿವೇಶನದ ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಚಿಂತನೆ ನಡೆಸಲು ಸಲಹೆ ನೀಡಲಾಗಿದೆ ಎಂದರು.

ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸಲು ಕ್ರಮ‌ವಹಿಸಲಾಗುತ್ತಿದ್ದು, ಪರಿಷತ್ ಸದಸ್ಯರ ವೇದಿಕೆ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸರಕಾರಕ್ಕೆ ಸಲಹೆ ನೀಡಲು ಕ್ರಮ ವಹಿಸಲಾಗುವುದು. ಸದನದಲ್ಲಿ ರಚನಾತ್ಮಕ ಚರ್ಚೆಗೆ ಪರಿಷತ್ ಸದಸ್ಯರ ಜತೆ ಈಗಾಗಲೇ ಚರ್ಚಿಸಲಾಗಿದ್ದು, ಸದನ ಸುಗಮವಾಗಿ ನಡೆಯಲು ಅಗತ್ಯ ಕ್ರಮಗಳನ್ನು ವಹಿಸಲಾಗಿದೆ. ಶಾಸಕರ ಹಾಜರಾತಿ ಹೆಚ್ಚಳಕ್ಕೆ ಕೂಡ ಆದ್ಯತೆ ನೀಡಲಾಗುವುದು. ಬೆಳಗಾವಿ ಸುವರ್ಣ ವಿಧಾನಸೌಧ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಧಿವೇಶನ ನಡೆಸಲು ಈ ಬಾರಿ 20 ಕೋಟಿ ಅಂದಾಜಿಸಲಾಗಿದೆ. ಶಾಸಕರ ಭವನ ನಿರ್ಮಿಸಲು ಕೆಲವು ಪ್ರಸ್ತಾವನೆಗಳು ಬಂದಿವೆ. ಇವುಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ನಿರ್ಧಾರ‌‌ ಕೈಗೊಳ್ಳಲಾಗುವುದು ಎಂದರು.

ಬೆಳಗಾವಿ ವಿಭಜನೆ ಸಾಧಕ-ಬಾಧಕಗಳ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆಯಾಗಬೇಕಿದೆ ಎಂದು ಬಸವರಾಜ ಹೊರಟ್ಟಿ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ವಿಧಾನ‌ ಪರಿಷತ್ ಕಾರ್ಯದರ್ಶಿ ಕೆ.ಆರ್.‌ಮಹಾಲಕ್ಷ್ಮೀ, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular