HomeLatest NewsBREAKING: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

BREAKING: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ಡಿಸೆಂಬರ್ 8 ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲ್ಲಿದ್ದು, ಅಧ್ವೇಶನ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆಯಾಗಿದೆ.

ನಾಳೆ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ. ಮಂಗಳವಾರ ರಾತ್ರಿ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಆರ್.ಅಶೋಕ್ ನೇತೃತ್ವದಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ. ಅಧಿವೇಶನದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರವನ್ನು ಹೇಗೆ ಮಣಿಸಬೇಕು, ಚರ್ಚಿಸಬೇಕಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular