HomeKarnatakaBIG NEWS: ಬೆಳಗಾವಿ ಸುವರ್ಣಸೌಧದಲ್ಲಿ ಡಿ. 11 ರಿಂದ ಚಳಿಗಾಲದ ಅಧಿವೇಶನ

BIG NEWS: ಬೆಳಗಾವಿ ಸುವರ್ಣಸೌಧದಲ್ಲಿ ಡಿ. 11 ರಿಂದ ಚಳಿಗಾಲದ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ ಎರಡನೇ ವಾರದಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ.

ಸುವರ್ಣಸೌಧದಲ್ಲಿ ಡಿಸೆಂಬರ್ 11 ರಿಂದ 22 ರವರೆಗೆ 10 ದಿನಗಳ ಕಾಲ ಅಧಿವೇಶನ ನಡೆಸಲು ಪ್ರಸ್ತಾಪಿಸಲಾಗಿದ್ದು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಪುಟ ಸಭೆಯಲ್ಲಿ ವಿಧಾನ ಮಂಡಲ ಅಧಿವೇಶನ ವಿಷಯ ಮುಖ್ಯ ಅಜೆಂಡಾದಲ್ಲಿದೆ. ಜುಲೈನಲ್ಲಿ ಬಜೆಟ್ ಅಧಿವೇಶನ ನಡೆದಿದ್ದು, ನಿಯಮದ ಪ್ರಕಾರ ಆರು ತಿಂಗಳೊಳಗೆ ಅಧಿವೇಶನ ನಡೆಸಬೇಕಿದೆ. ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ದಿನಾಂಕ ಗೊತ್ತುಪಡಿಸಿ ರಾಜ್ಯಪಾಲರ ಅನುಮೋದನೆಗೆ ಶಿಫಾರಸು ಮಾಡುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular