HomeKarnatakaBIG NEWS: ಡಿ. 9 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ

BIG NEWS: ಡಿ. 9 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರವರೆಗೆ ನಡೆಸಲು ಸರ್ಕಾರ ನಿರ್ಧರಿಸಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಅಧಿವೇಶನ ಕರೆಯುವ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದಿಂದ ಕಡತ ರವಾನಿಸಲಾಗಿದೆ.

ವಿಧಾನಸಬೆ ಸ್ಪೀಕರ್ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಅವರು ಇತ್ತೀಚೆಗೆ ಬೆಳಗಾವಿಗೆ ಭೇಟಿ ನೀಡಿ ಅಧಿವೇಶನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ 39ನೇ ಕಾಂಗ್ರೆಸ್ ಅಧಿವೇಶನ ನಡೆದಿದ್ದು, ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದರು. ಈ ಕಾರ್ಯಕ್ರಮ ನಡೆದು 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular